Home Latest ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ…!!

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ…!!

ಉಡುಪಿ: ನಗರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026ರ ಸಮಾರೋಪ ಸಮಾರಂಭವು ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಟಿ.ಕೆ. ಸ್ವರೂಪ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ್ ನಾಯ್ಕ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಡಿಎಆರ್ (DAR) ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪುರುಷರ ವಿಭಾಗದಲ್ಲಿ ಡಿಎಆರ್ ತಂಡದ ಜೀವನ್ ಹಾಗೂ ಮಹಿಳೆಯರ ವಿಭಾಗದಲ್ಲಿ ಉಡುಪಿ ಉಪವಿಭಾಗದ ನಾಗಶ್ರೀ ಅವರು ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.