Home Latest ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್…!!

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್…!!

ಬೆಂಗಳೂರು : ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕನ್ನಡ ಚಿತ್ರರಂಗದಲ್ಲಿ 52 ವರ್ಷಗಳ ಸುದೀರ್ಘ ಸಿನಿಪಯಣಕ್ಕೆ ಅವರಿಗೆ ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಒಲಿದು ಬಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣ. ಈ ಘಳಿಗೆ ಕನ್ನಡಿಗರ ಹರ್ಷಕ್ಕೆ ಕಾರಣವಾಗಿದೆ. ಡಾ. ರಾಜ್ ಕುಮಾರ್ ಅವರ ಕಾಲದಿಂದ ಕಲಾ ಸೇವೆ ಮಾಡಿಕೊಂಡು ಬಂದಿರುವ ಅನಂತ್ ನಾಗ್, ಹಲವಾರು ಸಿನಿಮಾಗಳು, ವಿಶೇಷ ಪಾತ್ರಗಳಲ್ಲಿ ನಟಿಸಿ, ಕನ್ನಡ ಸಿನಿರಸಿಕರಿಂದ ಸೈ ಎನಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುದೀರ್ಘ ಪಯಣ ಹಾಗೂ ಅಪಾರ ಕೊಡುಗೆಗಳನ್ನು ನೀಡಿರುವ ಅನಂತ್ ನಾಗ್ ಅವರ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ ಮತ್ತು ಕೈಗಾರಿಕೆ), ಡಾ. ವೆಂಕಪ್ಪ ಅಂಬಾಜಿ ಸುಗಟೇಕರ್ (ಕಲೆ) ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.