Home Latest ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೂತನ ಬೊಲೆರೋ ಜೀಪು ಹಸ್ತಾಂತರ..!

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೂತನ ಬೊಲೆರೋ ಜೀಪು ಹಸ್ತಾಂತರ..!

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್‌ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕಾರವಾರ ರೀಜನಲ್ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ವಾಹನವನ್ನು ಹಸ್ತಾಂತರಿಸಿದರು.