Home Crime ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಗಂಭೀರ…!!

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಗಂಭೀರ…!!

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಗಂಭೀರ ಗಾಯಗೊಂಡ ಸವಾರ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ ಸಂಜೀವ (50) ಎಂದು ತಿಳಿದು ಬಂದಿದೆ.

ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ವೇಳೆ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.