ಬೆಂಗಳೂರು : ನಗರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.) ಎಂಬವರು ಎಂದು ತಿಳಿದು ಬಂದಿದೆ.
ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



