Home Crime ಮದುವೆಯಾಗಲು ಪ್ರೇಯಸಿ ಯನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ : ಯುವತಿ ಎಸ್ಕೇಪ್‌…!!

ಮದುವೆಯಾಗಲು ಪ್ರೇಯಸಿ ಯನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ : ಯುವತಿ ಎಸ್ಕೇಪ್‌…!!

ಹಾವೇರಿ: ಪ್ರೀತಿಸಿದ ಹುಡುಗಿಯನ್ನು ಮನೆಯಿಂದ ಎಸ್ಕೇಪ್‌ ಮಾಡಿ ಮದುವೆಯಾಗಲು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ನಡೆದಿದ್ದು, ಯುವಕ ಭೀಕರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಇರ್ಫಾನ್‌ ಸೇರಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತವಾಗುತ್ತಿದ್ದಂತೆ ಸ್ಥಳದಿಂದ ಯುವತಿ ಎಸ್ಕೇಪ್‌ ಆಗಿದ್ದಾಳೆ.

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾಗಲು ಇರ್ಫಾನ್‌ ಬೆಂಗಳೂರಿನಿಂದ ಬಾಡಿಗೆ ಕಾರು ಮಾಡಿಕೊಂಡು ತನ್ನ ಸ್ನೇಹಿತರಾದ ಚಂದ್ರು ಮತ್ತು ಗುರುರಾಜ್‌ ಜೊತೆ ಹಿರೇಕೆರೂರಿನ ಯುವತಿ ಊರಿಗೆ ಬಂದಿದ್ದಳು. ಯುವಕ ಮತ್ತು ಯುವತಿ ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರ ನಡುವೆ ಪ್ರೀತಿ ಉಂಟಾಗಿದೆ. ಮದುವೆಯಾಗಲು ನಿರ್ಧಾರ ಮಾಡಿ ಕಾರಿನಲ್ಲಿ ಹೋಗುತ್ತಿದ್ದಾಗ, ಯುವತಿಯ ಪೋಷಕರು ಬೆನ್ನಟ್ಟಬಹುದು ಎನ್ನುವ ಭಯದಲ್ಲಿ ಯುವಕರು ವೇಗವಾಗಿ ಕಾರು ಚಲಾಯಿಸುತ್ತಿದ್ದರು. ಚನ್ನಹಳ್ಳಿ ತಾಂಡಾ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಕಾರು ಅಪಘಾತದಿಂದ ಸಂಪೂರ್ಣ ನುಜ್ಜುಗುಜ್ಜಗಿದ್ದು, ಇರ್ಫಾನ್‌ ಮತ್ತು ಆತನ ಇಬ್ಬರು ಸ್ನೇಹಿತರಿಗೆ ಗಂಭೀರ ಗಾಯವಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿದ್ದ ಯುವತಿ ಬಚಾವಾಗಿದ್ದು, ಅಪಘಾತ ಆಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಜನ ಗುಂಪು ಸೇರುವುದನ್ನು ಕಂಡು ಯುವತಿ ತನ್ನ ಪ್ರಿಯಕರನನ್ನು ಬಿಟ್ಟು ಬೆಂಗಳೂರು ಬಸ್‌ ಹತ್ತಿದ್ದಾಳೆ.

ಹಿರೇಕೆರೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.