Home Karavali Karnataka ಸುಧೀರ್ ಕುಮಾರ್ ರೆಡ್ಡಿ ನೂತನ ಮಂಗಳೂರು ಕಮಿಷನರ್…!!

ಸುಧೀರ್ ಕುಮಾರ್ ರೆಡ್ಡಿ ನೂತನ ಮಂಗಳೂರು ಕಮಿಷನರ್…!!

ಉಡುಪಿ: ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್‌ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.