ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ 30ರ ಶುಕ್ರವಾರ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, 1-10 ನೇ ತರಗತಿವರೆಗೆ ಮೇ 30ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಅವರು ಆದೇಶಿಸಿದ್ದಾರೆ.
ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆಯು ಎಂದಿನಂತೆ ನಡೆಯಲಿದೆ. ಶಾಲಾ ಆರಂಭೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.