Home Crime ಕಾರ್ಕಳ : ಮನೆಯೊಂದರಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವು…!!

ಕಾರ್ಕಳ : ಮನೆಯೊಂದರಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವು…!!

ಕಾರ್ಕಳ: ನಗರದ ಸಮೀಪ ಮನೆಯೊಂದರಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ನಡೆಸಿದ ಘಟನೆ ನಡೆದಿದೆ.

ನೀರೆ ನಿವಾಸಿ ರಾಧಾಕೃಷ್ಣ ಎಂಬವರ ಮನೆಯಲ್ಲಿ ಕಳ್ಳತನ ಸಂಭವಿಸಿದೆ.

ಕಾರ್ಕಳ ಪೊಲೀಸ್ ಠಾಣೆಯಲ್ಲಿ  ಕಳ್ಳತನ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ವಿವರ: ಪಿರ್ಯಾದಿದಾರರಾದ ರಾಧಾಕೃಷ್ಣ (58),ನೀರೆ ಗ್ರಾಮ, ಕಾರ್ಕಳ ಇವರು ದಿನಾಂಕ 28/05/2025 ರಂದು ಬೆಳಿಗ್ಗೆ 08:00 ಗಂಟೆಗೆ ಪಿರ್ಯಾದಿದಾರರು, ಅವರ ಪತ್ನಿ ಮತ್ತು ಮಗಳು ಉಡುಪಿಗೆ ಕೆಲಸಕ್ಕೆ ಹೋಗಿದ್ದು, ನಂತರ ಪಿರ್ಯಾದಿದಾರರ ಮಗ ಬೆಳಿಗ್ಗೆ 10:00 ಗಂಟೆಗೆ ಮನೆಗೆ ಬೀಗ ಹಾಕಿ ಉಡುಪಿಗೆ ಹೋಗಿರುತ್ತಾರೆ. ಬೆಳಿಗ್ಗೆ 10:00 ಗಂಟೆಯಿಂದ 17:45 ಗಂಟೆಯ ಮದ್ಯಾವಧಿಯಲ್ಲಿ ಯಾರೋ ಕಳ್ಳರು ಪಿರ್ಯಾದಿದಾರರ ಮನೆಯ ಹಿಂದಿನ ಬಾಗಿಲನ್ನು ಯಾವುದೋ ಸಾಧನದಿಂದ ಮೀಟಿ ತೆರೆದು ಒಳಪ್ರವೇಶಿಸಿ ಕೋಣೆಯೊಳಗಡೆ ಇದ್ದ ಕಪಾಟಿನ ಪಕ್ಕದಲ್ಲಿರುವ ಮೇಕಪ್‌ ಸ್ಟ್ಯಾಂಡ್‌ನ ಕೆಳಗಿನ ಡ್ರಾವರನ್ನು ತೆರೆದು ಅದರೊಳಗಡೆ ಇಟ್ಟಿದ್ದ 30 ಗ್ರಾಂ ತೂಕದ ಚಿನ್ನದ ಕಡಗ ಇನ್ನೊಂದು ಬೆಡ್‌ರೂಮ್‌ನ ಒಳಗಡೆ ತೆರೆದ ಕಪಾಟಿನಲ್ಲಿ ಬಾಕ್ಸ್‌ನಲ್ಲಿ ಇಟ್ಟಿದ್ದ ಬೆಳ್ಳಿಯ ಸೊಂಟದ ನೂಲು -2, ಬೆಳ್ಳಿಯ ತುಳಸಿ ಮಾಲೆ -1 ಮತ್ತು 1 ಜೊತೆ ಬೆಳ್ಳಿಯ ಕಾಲುಗೆಜ್ಜೆ ಇವುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 76/2025 ಕಲಂ: 331(3), 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ