ಉಡುಪಿ : ಕರ್ನಾಟಕ ರಾಜ್ಯ ಪೌರ ನೌಕರರ ಸಂಘ (ರಿ. ) ವತಿಯಿಂದ ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉಡುಪಿ ನಗರ ಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಭಾಗವಹಿಸಿ ಮನವಿ ಸ್ವೀಕರಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ನಗರದ ನೈರ್ಮಲ್ಯವನ್ನು ಕಾಪಾಡುವವರು. ನಾನು ಸಚಿವನಾಗಿದ್ದಾಗ ಚಂಡಿಗಢ ಮಾದರಿಯಲ್ಲಿ ಕರ್ನಾಟಕದಲ್ಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಬೇಡಿಕೆ ಇಟ್ಟಿರುವಂತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ರವರು ಬೆಂಬಲವನ್ನು ನೀಡಿದ್ದರು. ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಸುವಂತೆ ಪ್ರಸ್ತಾಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ್ ಕಾಂಚನ್, ಸೌರಭ್ ಬಲ್ಲಾಳ್, ಗಣೇಶ್ ನೆರ್ಗಿ,ಶರತ್ ಶೆಟ್ಟಿ, ಪ್ರದೀಪ್ ಸೇರಿಗಾರ್, ಯುವರಾಜ್ ಪುತ್ತೂರು ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.





