ಉಡುಪಿ: ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಬಳಿ ನಡೆದಿದೆ.
ಮೂಡ ನಿಡಂಬೂರು ನಿವಾಸಿ, ಅಕ್ಷಯ್ (23) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರಿಗೆ ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು.
ಈ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಆತನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.