Home Latest ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು…!!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು…!!

ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.

ಮುಜಾಮಿಲ್ (15) ಮೃತ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರನಾಗಿರುವ ಮುಜಾಮಿಲ್ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿಯಾಗಿದ್ದ.

ರಜೆ ಹಿನ್ನೆಲೆ ವಿದ್ಯಾರ್ಥಿ ಮನೆಗೆ ಬಂದಿದ್ದ ಮುಜಾಮಿಲ್ ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿತ್ತು. ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದ್ರನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.