Home Dskshina Kannada ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿ: ಪ್ರಯಾಣಿಕರು ಪಾರು…!!

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿ: ಪ್ರಯಾಣಿಕರು ಪಾರು…!!

ಸುಳ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದು ಕಾರು ಸಂಪೂರ್ಣವಾಗಿ ಜಖಂಗೊOಡ ಘಟನೆ ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಪವಾಡಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಕಾರಿನಲ್ಲಿ ಪಂಜ ಕಡೆಗೆ ಪ್ರಯಾಣಿಸುತ್ತಿದ್ದರು.

ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದಾಗ ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರು ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮರ ಬಿದ್ದ ಕಾರಣ ಸುಮಾರು ಅರ್ಧ ಗಂಟೆ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಸ್ಥಳೀಯ ನಿವಾಸಿಗಳು ಮರವನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.