ಬಂಟ್ವಾಳ : ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಯುವಕ ಪ್ರಶಾಂತ್ ಆಚಾರ್ಯ(24) ಎಂದು ತಿಳಿದು ಬಂದಿದೆ.
ಪ್ರಶಾಂತ್ ಆಚಾರ್ಯ ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಫೆ.22ರಂದು ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಸುಮಾರು 11 ಗಂಟೆಯ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.



