Home Latest ಕಾಪು : ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ…!!

ಕಾಪು : ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ…!!

ಕಾಪು : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ (ನಿ.) ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2024-25ನೇ ಸಾಲಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ 21 ಫಲಾನುಭವಿಗಳಿಗೆ ಮಂಜೂರಾದ ಹೊಲಿಗೆ ಯಂತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರಿಕರಣ ಯೋಜನೆಯಡಿಯಲ್ಲಿ ಮಂಜೂರಾದ ಟ್ರಾಕ್ಟರ್ ಅನ್ನು ಶಾಸಕರು ಫಲಾನುಭವಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರ ಮಂಜು ಉಪಸ್ಥಿತರಿದ್ದರು.