Home Crime ಪಡುಬಿದ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಪಡುಬಿದ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

ಉಡುಪಿ: ಪಡುಬಿದ್ರಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿರ್ವ ಗ್ರಾಮದ ಕಾಫು ನಿವಾಸಿ ಚಂದ್ರಶೇಖರ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೆಲವು ವರ್ಷಗಳಿಂದ ಸರಿಯಾಗಿ ಕೆಲಸಕ್ಕೆ ಹೋಗದೆ ವಿಪರೀತ ಮದ್ಯಪಾನ ಮಾಡುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರೆಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ದಿನಾಂಕ 24 ಫೆಬ್ರವರಿ 2026 ರಂದು ಮಧ್ಯಾಹ್ನ 12 ಗಂಟೆಯಿಂದ 1:30 ಗಂಟೆಯ ನಡುವೆ ತಮ್ಮ ಮನೆಯಲ್ಲಿ ಮಲಗುವ ಕೋಣೆಯ ಮಾಡಿನ ಪಕ್ಕಾಸಿಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ