Home Crime ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ : ಪ್ರಭಾಕರ ಭಟ್ ವಿರುದ್ಧ ಎಫ್ ಐ...

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ : ಪ್ರಭಾಕರ ಭಟ್ ವಿರುದ್ಧ ಎಫ್ ಐ ಆರ್…!!

ಬಂಟ್ವಾಳ: ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.