ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಬಂದು ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ಮಾರಣಾಂತಿಕ ಹಲ್ಲೆ ಯನ್ನು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ ( ಸಿಐಟಿಯು) ಖಂಡಿಸುತ್ತದೆ.
ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಯಿಂದ ಬಂದ ಬಡಾ ಕಾರ್ಮಿಕರ ಮೇಲೆ ಹಲ್ಲೆ, ದಬ್ಬಾಳಿಕೆ, ದೌರ್ಜನ್ಯ ಹೆಚ್ಚುತ್ತಿದ್ದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮವನ್ನು ವಹಿಸಬೇಕು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಶೇಖ್ ಅಯ್ಯುಬ್ ಮೇಲೆ ಹಲ್ಲೆ ನಡೆಸಿದ ಮಿಥುನ್ ಕರ್ಕೇರ ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಮೀನುಗಾರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು) ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್ ಒತ್ತಾಯಿಸಿದ್ದಾರೆ.





