ಉಡುಪಿ : ನಗರದ 80 ಬಡಗುಬೆಟ್ಟುವಿನಲ್ಲಿ ಕಂಬಳಕರೆಗೆ ಶಂಕುಸ್ಥಾಪನೆ ನೆರವೇರಿಸುವ ಕುರಿತಂತೆ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆ ವರೆಗೆ ಮಣಿಪಾಲ ಠಾಣಾ ವ್ಯಾಪ್ತಿಯ 80ಬಡಗುಬೆಟ್ಟು ಗ್ರಾಮದ ಸ.ನ 11/1ರ ಯುವಜನ ಮತ್ತು ಕ್ರೀಡಾ ಇಲಾಖೆ ಹಾಗು ಜಿಲ್ಲಾಡಳಿತಕ್ಕೆ ಕಾಯ್ದಿರಿಸಿದ 6.30 ಎಕರೆ ಜಾಗದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬಡಗುಬೆಟ್ಟುವಿನಲ್ಲಿ ಇಂದು(ಫೆ.28) ಬಿಜೆಪಿ ಮುಖಂಡ ಶುಭಕರ ಶೆಟ್ಟಿ ನೇತೃತ್ವದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಂಬಳ ಕರೆಗೆ ಶಂಕುಸ್ಥಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.
ಆದರೆ ಜಿಲ್ಲಾಡಳಿತ ಕಾರ್ಯಕ್ರಮವನ್ನು ಮಾರ್ಚ್ 4ರಂದು ಆಯೋಜಿಸಿದ್ದು ಗೊಂದಲ ಏರ್ಪಟ್ಟಿತ್ತು. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.



