ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾದ ಲಾಡ್ಜ್ ನ ರೂಮ್ ಒಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ಚುಮಾನ್ ರಾಮ್ ಎಂದು ತಿಳಿದು ಬಂದಿದೆ.
ಪ್ರಕರಣದ ವಿವರ : ದಿನಾಂಕ 05/06/2025 ರಂದು ರಾಮಚಂದ್ರ ನಾಯಕ್, ವೃತ್ತ ನಿರೀಕ್ಷಕರು, ಮಲ್ಪೆ ವೃತ್ತ, ಪ್ರಭಾರ ಪಿಐ ಮಣಿಪಾಲ ಪೊಲೀಸ್ ಠಾಣೆ ಇವರಿಗೆ ಬಡಗುಬೆಟ್ಟು ಗ್ರಾಮದ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ನ ಒಂದನೆ ಮಹಡಿಯಲ್ಲಿನ ರೂಮ್ ನಂಬ್ರ 104 ರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬುದಾಗಿ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿತ ಚುಮಾನ್‌ರಾಮ್ ಈತನನ್ನು ವಶಕ್ಕೆ ಪಡೆದುಕೊಂಡಿರುವುದಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 92/2025 ಕಲಂ: 3,4,5,6 ITP Act ರಂತೆ ಪ್ರಕರಣ ದಾಖಲಾಗಿರುತ್ತದೆ.