Home Kundapura News ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು..!

ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು..!

ಕುಂದಾಪುರ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು (ರವಿವಾರ) ಬೆಳಿಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

‘ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿ’ಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.

ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು ಎನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನಾಸಿರ್‌ ಹುಸೇನ್‌ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.