ಕುಂದಾಪುರ: ಕುಂದಾಪುರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಬಸ್ಸು ಸುಟ್ಟು ಕರಕಲಾದ ಘಟನೆ ಹುಲಿಕಲ್-ಬಾಳೆಬರೆ ಘಾಟಿ ಮಾರ್ಗದಲ್ಲಿ ಮಧ್ಯಾಹ್ನ ಸಂಭವಿಸಿದೆ.
ಬಸ್ ನ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಬಳಿಕ ಹಠಾತ್ತನೆ ಬೆಂಕಿ ಹೊತ್ತಿ ಉರಿದಿದೆ. ಅಪಾಯದ ಮುನ್ಸೂಚನೆ ಅರಿತ ಚಾಲಕ ಹಾಗೂ ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ.
ಬಸ್ ಗೆ ಬೆಂಕಿ ಹತ್ತಿಕೊಂಡ ವಿಡಿಯೋ ದೃಶ್ಯಾವಳಿ ವೈರಲ್ ಆಗಿದ್ದು, ಇಡೀ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.



