Home Crime ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ಸುದ್ದಿ ಘೋಷಿಸುವಾಗ ಕಣ್ಣೀರು ಹಾಕಿದ ಟಿವಿ‌...

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ಸುದ್ದಿ ಘೋಷಿಸುವಾಗ ಕಣ್ಣೀರು ಹಾಕಿದ ಟಿವಿ‌ ನಿರೂಪಕ…!!

ಟೆಹ್ರಾನ್ : ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಮಾಧ್ಯಮ ಕೂಡ ಹತ್ಯೆಯನ್ನ ದೃಢಪಡಿಸಿದೆ.

ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್‌ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್‌ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ.