Home Latest ಚೆಕ್ ಅಮಾನ್ಯ : ಆರೋಪಿಗೆ ಶಿಕ್ಷೆ ದಂಡ…!!

ಚೆಕ್ ಅಮಾನ್ಯ : ಆರೋಪಿಗೆ ಶಿಕ್ಷೆ ದಂಡ…!!

ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ.

ದಂಡದ ಮೊತ್ತ 55,000 ರೂ. ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದೆಂದು ಆದೇಶಿಸಿದ್ದಾರೆ.

ಪಿರ್ಯಾದಿದಾರ ಶಿರಿಯಾರ ಗ್ರಾಮದ ಬಡಾಕರೆಯ ನಿವಾಸಿ ಸುರೇಂದ್ರ ಶೆಟ್ಟಿ ಪರ ಉಡುಪಿಯ ಹಿರಿಯ ನ್ಯಾಯವಾದಿ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವಾದಿಸಿದ್ದರು.