ಉಡುಪಿ: ಮಣಿಪಾಲ ಡಿಸಿ ಕಚೇರಿಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶ ಮೂಲದ ಬ್ರಿಜೇಶ್ (39) ಮೃತ ವ್ಯಕ್ತಿ.
ಶನಿವಾರ ಬೆಳಗ್ಗಿನ ಜಾವ 3 ಗಂಟೆಗೆ ತಲೆನೋವು, ವಾಂತಿಯಾಗಿದ್ದು, ಈ ಬಗ್ಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ಬಳಿಕ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ 9.45 ಕ್ಕೆ ಮೃತಪಟ್ಟಿದ್ದಾರೆ.



