ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.
ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಉಳ್ಳಾಲದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು, ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮು ಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
“shankar11916” ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್ ಮಾಡಿದ್ದು, ಇದು ವೈರಲ್ ಆಗಿದೆ.
ಈ ಬಗ್ಗೆ ಸ್ಪೀಕರ್ ಖಾದರ್ ಅವರು ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿದ್ದು, ಉಳ್ಳಾಲದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು, ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮು ಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಹಾಗು ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಈ ಮಾಹಿತಿ ಹಂಚಿಕೊಂಡಿದ್ದಕ್ಕೆ ಧನ್ಯವಾದ ಎಂದು ತಿಳಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅಪರಾಧ. ಉಳ್ಳಾಲ ಠಾಣೆಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.



