Home Karavali Karnataka ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಪೊಲೀಸ್ ವರಿಷ್ಠಾಧಿಕಾರಿ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಪೊಲೀಸ್ ವರಿಷ್ಠಾಧಿಕಾರಿ ಹರರಾಮ್ ಶಂಕರ್ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನೆ….!!

ಉಡುಪಿ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿ ಉಡುಪಿ ಜಿಲ್ಲೆಗೆ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾದ್ಯಂತ ಶಾಂತಿ ನೆಲೆಸಲು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿ ಸಮಾಜಘಾತುಕ ಶಕ್ತಿಗಳು ಯಾವುದೇ ಜಾತಿ, ಧರ್ಮ, ಪಕ್ಷವಿರಲಿ. ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶೇಖ್ ಮೊಹಮ್ಮದ್ ಆತೀಫ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶೆಟ್ಟಿ, ಮಮತಾ ನಾಯ್ಕ್, ಸಂಜಯ್ ಆಚಾರ್ಯ, ಪ್ರವೀಣ್ ಬಾರ್ಕೂರು, ಸ್ಟೀಫನ್ ಪ್ರಖ್ಯಾತ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು…