Home Crime ನಾಪತ್ತೆಯಾಗಿದ್ದ ವ್ಯಕ್ತಿಯ‌ ಶವ ಕೊಳೆತ ಸ್ಥಿತಿಯಲ್ಲಿ ಇಂದ್ರಾಣಿ ನದಿಯಲ್ಲಿ ಪತ್ತೆ…!!

ನಾಪತ್ತೆಯಾಗಿದ್ದ ವ್ಯಕ್ತಿಯ‌ ಶವ ಕೊಳೆತ ಸ್ಥಿತಿಯಲ್ಲಿ ಇಂದ್ರಾಣಿ ನದಿಯಲ್ಲಿ ಪತ್ತೆ…!!

ಉಡುಪಿ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯ ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂಬದಿಯ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾ‌ಸಿ ಸುರೇಶ್ ಪೂಜಾರಿ (54) ಎಂದು ಗುರುತಿಸಲಾಗಿದೆ.

ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಘಟನಾ‌ ಸ್ಥಳಕ್ಕೆ ಮಲ್ಪೆ ಪೋಲಿಸ್ ಠಾಣೆಯ ಎ.ಎಸ್. ಐ ಹರೀಶ್ ಕೆ ಆಗಮಿಸಿ ಮಹಜರು ಪ್ರಕ್ರಿಯೆ ನಡೆಸಿದರು.

ಕಂದಕದಲ್ಲಿದ್ದ ಮೃತದೇಹವನ್ನು ಮೇಲಕೆತ್ತುವ ಪ್ರಯಾಸದ ಕಾರ್ಯಾಚರಣೆ ಮತ್ತು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಮೃತದೇಹ ಸಾಗಿಸುವ ಕಾರ್ಯವು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೇತ್ರತ್ವದಲ್ಲಿ ನಡೆಯಿತು.