ಕಡಬ : ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆಸ್ಪತ್ರೆಯಲ್ಲಿ ಗಾಯಾಳು ಹನುಮಪ್ಪ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಈ ಘಟನೆ ನಡೆದಿದೆ.
ಗಾಯಾಳು ಸಾವಿನ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವಾಗಿ ಪ್ರಕರಣ ಬದಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಸಾವನ್ನಪ್ಪಿದ್ದಾನೆ.
ಸಹೋದರ ನಿಂಗಪ್ಪ (21) ಈ ಕೃತ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ.
ಮಂಗಳೂರು ವಿಭಾಗದ ರೈಲ್ವೇ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ.
ಇನ್ಸ್ಪೆಕ್ಟರ್ ಜಯಾನಂದ, ಎಎಸ್ಐ ಮಧುಚಂದ್ರ,ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರಂಭದಲ್ಲಿ ಕಡಬ ಠಾಣಾ ಎಸ್.ಐ. ಅಭಿನಂದನ್ ಮತ್ತು ಸಿಬ್ಬಂದಿಗಳಿಂದ ಆರೋಪಿ ವಶಕ್ಕೆ ಪಡೆದು ಕೊಂಡಿದ್ದಾರೆ.
ಪುತ್ತೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಹೋದರರು ಕುಡಿದ ಮತ್ತಿನಲ್ಲಿ ಜಗಳ ಮಾಡಿಕೊಂಡು ಈ ಘಟನೆ ಸಂಭವಿಸಿದೆ.


