Home Crime ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ…!!

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ…!!

Close-up Of Male Judge In Front Of Mallet Holding Documents

ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಕರಜಗ ಗ್ರಾಮದ ನಿವಾಸಿ ಧರೆಪ್ಪ ಅಲಿಯಾಸ ಧೀರಜ ಅಂಗತ ಖನಸೆ(೨೫) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.

ಅಂಗವಿಕಲ ಮತ್ತು ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ 2025 ರ ಅಗಷ್ಟದಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡ ತನಿಖಾಧಿಕಾರಿ ರವಿ ನಾಯ್ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪ್ರಕರಣ ಕುರಿತು ವಿಚಾರಣೆ ಸಲ್ಲಿಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 6 ಲಕ್ಷ ರೂ.ಪರಿಹಾರ ಧನ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ವಾದ ಮಂಡಿಸಿದ್ದರು.