ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್‌ನಲ್ಲಿ ನಡೆದಿದ್ದು,
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಬೂಬಕ್ಕರ್ ಎಂದು ಗುರುತಿಸಲಾಗಿದೆ.
ಉಜಿರೆಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಆತ ಅಸಭ್ಯವಾಗಿ ವರ್ತಿಸಿದಲ್ಲದೇ ದೈಹಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.