Home Crime ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ….!!

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ….!!

ಗುಜರಾತ್: ಗುಜರಾತ್‌ನ ಅಹಮದಾಬಾದ್‌ ಏರ್ ಪೋರ್ಟ್ ನಲ್ಲಿ ಸಿಬ್ಬಂದಿ ಸೇರಿ 242 ಮಂದಿ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ ಪತನಗೊಂಡಿದೆ.

ಟೇಕಾಪ್ ಆದ ಕೆಲ ಹೊತ್ತಿನಲ್ಲೇ ವಿಮಾನ ಪತನಗೊಂಡಿದೆ. ಅಹಮದಾಬಾದ್‌ ನಿಂದ ಲಂಡನ್ ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ.

ಗಾಯಾಳುಗಳನ್ನು‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ಹಿಂದಿನ‌ಭಾಗ ಮರಕ್ಕೆ ಬಡಿದು ವಿಮಾನ ನೆಲಕ್ಕಪ್ಪಳಿಸಿದೆ ಎನ್ನಲಾಗಿದೆ.

ಇಂದು ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿ ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿ ಪತನವಾದ ಏರ್ ಇಂಡಿಯಾ ವಿಮಾನದ ಫಸ್ಟ್ ಆಫೀಸರ್ ಆಗಿದ್ದ ಕ್ಲೈವ್ ಕುಂದರ್ ಮಂಗಳೂರು ಮೂಲದವರು ಎಂದು ತಿಳಿದು ಬಂದಿದೆ.