Home Latest ಕಾಪು ತಾಲೂಕು ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ…!!

ಕಾಪು ತಾಲೂಕು ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ…!!

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 05-03-206 ರಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 2 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸರ್ವೆ ಪರಿಶೀಲನಾ ವರದಿಗೆ ಹಾಗೂ 2 ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಿ 1 ಕಡತವನ್ನು ಕಾಯ್ದಿರಿಸಿ ಒಟ್ಟು 7 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಅಂನತ ಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.