Home Crime ಜೆಸ್ಕಾಂ ಸಹಾಯಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ದಾಳಿ…!!

ಜೆಸ್ಕಾಂ ಸಹಾಯಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ದಾಳಿ…!!

ಯಾದಗಿರಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜೆಸ್ಕಾಂ ಸಹಾಯಕ ಅಭಿಯಂತರ (ಎಇ) ವಿರೇಶ್ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ.

ನಗರದ ಮಾತಾಮಾಣಿಕೇಶ್ವರಿ ನಗರದಲ್ಲಿರುವ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಯ ಬಳರಗಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.