Home Crime 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಜಿಬಿಎ ಸಿಬ್ಬಂದಿ…!!

10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಜಿಬಿಎ ಸಿಬ್ಬಂದಿ…!!

ಬೆಂಗಳೂರು : ಲಂಚ ಸ್ವೀಕರಿಸುತ್ತಿದ್ದ ಗ್ರೇಟರ್ ಬೆಂಗಳೂರು ಅಥಾರಿಟಿ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಎಂ. ನಾಗರಾಜ್ (39) ಎಂದು ಗುರುತಿಸಲಾಗಿದೆ.

ಆತ ಬೆಂಗಳೂರಿನ ಕಾವಲ್ ಬೈರಸಂದ್ರ ಪ್ರದೇಶದಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮಾಹಿತಿಯ ಪ್ರಕಾರ, ಆರ್.ಟಿ.ನಗರ ನಿವಾಸಿ ಅಬ್ದುಲ್ ರೆಹ್ಮಾನ್ ಎಂಬ ಎಲೆಕ್ನಿಕಲ್ ಕಾಂಟ್ರಾಕ್ಟರ್ ಒಂದು ಅಪಾರ್ಟ್‌ಮೆಂಟ್‌ನಲ್ಲಿ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸುವ ಕೆಲಸ ಕೈಗೊಂಡಿದ್ದರು.

 

ಈ ವೇಳೆ ರಸ್ತೆ ತೋಡುವ ಕೆಲಸಕ್ಕಾಗಿ ಚಿಪ್ಪಿಂಗ್ ಯಂತ್ರವನ್ನು ಬಳಸಲಾಗಿತ್ತು. ನಗರದ ಕಾವಲ್ ಬೈರಸಂದ್ರದ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಅಬ್ದುಲ್ ರೆಹಮಾನ್ ಅವರು ರಸ್ತೆ ದುರಸ್ತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಅಲ್ಲಿದ್ದ ಚಿಪ್ಪಿಂಗ್ ಯಂತ್ರವನ್ನು ನಗರ ಪಾಲಿಕೆಯ ಆರೋಗ್ಯ ವಿಭಾಗದ ಸ್ಯಾನಿಟರಿ ಸೂಪರ್‌ಸರ್ ಎಂ.ನಾಗರಾಜ ಅವರು ಅನಧಿಕೃತವಾಗಿ ಜಪ್ತಿ ಮಾಡಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

 

ಯಂತ್ರವನ್ನು ಬಿಡುಗಡೆ ಮಾಡಲು 110,000 ಲಂಚ ನೀಡುವಂತೆ ನಾಗರಾಜ ಅವರು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಬ್ದುಲ್ ಅವರು ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಅಬ್ದುಲ್ ಅವರು ನಾಗರಾಜ ಅವರಿಗೆ ಗುರುವಾರ ಹಣ ನೀಡಿದ್ದರು. ಈ ವೇಳೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.

 

ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಲಂಚದ ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ನಾಗರಾಜ್ ಸ್ಥಳಕ್ಕೆ ಬಂದು ಯಂತ್ರವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸುವುದಾಗಿ ಹಾಗೂ ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಹೇಳಲಾಗಿದೆ. ಬಳಿಕ ಪ್ರಕರಣ ದಾಖಲಿಸದೇ ಯಂತ್ರವನ್ನು ಹಿಂದಿರುಗಿಸಲು 120,000 ಲಂಚ ಕೇಳಿದ್ದಾನೆ ಎಂಬ ಆರೋಪವಿದೆ. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.