ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಜೀವಾವಧಿ ಶಿಕ್ಷೆ ಹಾಗೂ 10ಸಾ. ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಶಿಕ್ಷೆಗೊಳಗಾದ ಆರೋಪಿ ಮುರುಗನ್ ಎಂದು ತಿಳಿದು ಬಂದಿದೆ.
2022ರ ಮಾ.19ರಂದು ರಾತ್ರಿ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯಲ್ಲಿ ಉಲ್ಲಂಜೆ ಎಂಬಲ್ಲಿನ ಹರೀಶ್ ಸಾಲ್ಯಾನ್ (47) ಎಂಬಾತನನ್ನು ಹಣಕಾಸಿನ ದ್ವೇಷದಿಂದ ಮುರುಗನ್ ಕೆಂಪುಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ.
ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸಿಐ ಕುಸುಮಧರ್ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು.
ಇದೀಗ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಜೀವಾವಧಿ ಶಿಕ್ಷೆ ಹಾಗೂ 10ಸಾ. ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.



