Home Crime ಬೆಳ್ತಂಗಡಿ: 6ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಬೆಳ್ತಂಗಡಿ: 6ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಂಗಳೂರು ಕುಂಬಳಗೋಡು, ಗೇರುಪಾಳ್ಯ ನಿವಾಸಿ ವೆಂಕಟೇಶ್ ಡಾಬ‌ರ್ ವೆಂಕಟೇಶ್ (38) ಎಂದು ತಿಳಿದು ಬಂದಿದೆ.

ಆರೋಪಿಯನ್ನು ತುಮಕೂರು ಜಿಲ್ಲೆಯ ತಿಪಟೂ‌ರ್ ಎಂಬಲ್ಲಿಂದ ಮಾ.4 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಾ.5 ರಂದು ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ತಿಳಿದು ಬಂದಿದೆ.