Home Karavali Karnataka ಉಡುಪಿ: ನಾಳೆ (ಜೂನ್ 16) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ…!!

ಉಡುಪಿ: ನಾಳೆ (ಜೂನ್ 16) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ…!!

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಮಂಗಳೂರು : ನಾಳೆ ಜೂ 16 ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರು ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ ಎಂದು‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.