ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ. ವಿಚ್ಛೇದನ ಸಂಬಂಧಿತ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗುತ್ತಿರುವ ನಡುವೆಯೇ, ಅವರ ಪತ್ನಿ ಸಂಗೀತ ಸೋರ್ನಲಿಂಗಮ್ ಮತ್ತೊಮ್ಮೆ ಕೋರ್ಟ್ ಕದ ತಟ್ಟಿದ್ದು, ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ವಿಜಯ್ ಅವರು ನಟಿ ತ್ರಿಷಾ ಕೃಷ್ಣನ್ ಅವರೊಂದಿಗೆ ಒಂದೇ ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ಘಟನೆಯ ಬಳಿಕ ವಿಜಯ್ ಅವರ ಕುಟುಂಬ ಜೀವನದ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ.
ಈ ನಡುವೆ ವಿಜಯ್ ಪತ್ನಿ ಸಂಗೀತಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ. ತಾನು ಇಂಗ್ಲೆಂಡ್ ಪ್ರಜೆ ಆಗಿರುವುದರಿಂದ ಭಾರತದಲ್ಲಿ ತನ್ನ ಹೆಸರಿನಲ್ಲಿ ಸ್ವಂತ ಮನೆ ಇಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣದ ಮುಂದಿನ ವಿಚಾರಣೆ ವೇಳೆ ಕೋರ್ಟ್ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.



