Home Crime ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ಕಾರು ಢಿಕ್ಕಿ ಹೊಡೆದು ಮೃತ್ಯು…!!

ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ಕಾರು ಢಿಕ್ಕಿ ಹೊಡೆದು ಮೃತ್ಯು…!!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ‌ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದ ಮಹಿಳೆ ವೀಣಾ ಎಂದು ತಿಳಿದು ಬಂದಿದೆ.

ಕಾರ್ಕಳ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಸಾರಾಂಶ : ದಿನಾಂಕ 15/06/2025 ರಂದು ಮಧ್ಯಾಹ್ನ 12:00 ಗಂಟೆಗೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆಯಲ್ಲಿರುವ ಗುಲಾಬಿ ಎಂಬ ಹೆಸರಿನ ಹೋಟೆಲ್ ಮುಂಭಾಗದಲ್ಲಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರು ನಂಬ್ರ KA-51-MK-3318 ನೇದರ ಚಾಲಕನು ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಗುಲಾಬಿ ಹೋಟೆಲ್ ಮುಂಭಾಗದಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಮನೆಗೆ ಹೋಗಲು ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ಪಿರ್ಯಾದಿದಾರರಾದ ರಮಾನಂದ (64),ಕಸಬಾ ಗ್ರಾಮ ಕಾರ್ಕಳ ಇವರ ಮಗಳ ಅತ್ತೆ ಸವಿತಾ @ ವೀಣಾ (59) ಇವರಿಗೆ ಢಿಕ್ಕಿ ಹೊಡೆದ ಪರಿಣಾಮ, ಅವರ ತಲೆಯ ಹಿಂಬದಿ ಒಳಜಖಂ ಒಳಜಖಂಗೊಂಡವರನ್ನು ಕಾರ್ಕಳದ ಪ್ರತಿಮಾ ನರ್ಸಿಂಗ್ ಹೋಂ, ಬಳಿಕ ಕಾರ್ಕಳ ಟಿ.ಎಂ.ಎ. ಪೈ. ರೋಟರಿ ಆಸ್ಪತ್ರೆ ಇಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೇ ದಿನಾಂಕ 15/06/2025 ರಂದು ಮಧ್ಯಾಹ್ನ 2:25 ಗಂಟೆಗೆ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 81/2025 ಕಲಂ: 281,125(ಎ), 125(ಬಿ) BNS ರಂತೆ ಪ್ರಕರಣ ದಾಖಲಾಗಿರುತ್ತದೆ.