ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ರಾಡಿ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಕೌಟುಂಬಿಕ ಕಲಹದ ಕಾರಣದಿಂದ ಮಹಿಳೆಯೊಬ್ಬರು ಆವೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ERSS-112 ಗೆ ಕರೆಮಾಡಿ ಮಾಹಿತಿ ನೀಡಿದರು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸೋಮೇಶ್ವರ ಚೆಕ್‌ಪೋಸ್ಟ್‌ನಲ್ಲಿ ವಾಹನವನ್ನು ತಡೆದು, ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತವಾಗಿ ತಿಳಿಹೇಳಿ ಮಹಿಳೆಯನ್ನು ಸಮಾಧಾನಪಡಿಸಿ ಕಳುಹಿಸಿರುತ್ತಾರೆ.



