Home Crime ಕುಂದಾಪುರ : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು….!!

ಕುಂದಾಪುರ : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು….!!

ಕುಂದಾಪುರ: ಹಂಗಳೂರು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ಮಿ ಕಾರು ಢಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟ ಘಟನೆ ನಡೆದಿದೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ಮಿ ಕಾರನ್ನು ಅದರ ಚಾಲಕ ಲವ ಕುಮಾರ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ರಸ್ತೆಯ ತೀರ ಎಡಬದಿಗೆ ಬಂದು ರಸ್ತೆಯ ಪೂರ್ವಬದಿಯಲ್ಲಿ ನಿಂತುಕೊಂಡಿದ್ದ ಚಂದ್ರರವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ ತಲೆಗೆ ಹಾಗೂ ಬಲಕಾಲಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು, ತಕ್ಷಣ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ತೀವ್ರ ಸ್ವರೂಪ ಗಾಯಗೊಂಡಿದ್ದ ಚಂದ್ರರವರನ್ನು ಆಸ್ಪತ್ರೆ ವೈದ್ಯರು ಚಿಕಿತ್ಸೆಗೆ ಒಳರೋಗಿಯಾಗಿ ದಾಖಲಿಸಿಕೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು.

ಓಮ್ಮಿ ಕಾರ್ ನಲ್ಲಿದ್ದ ಅನುಸೂಯ ಮತ್ತು ರಮಾಮಣಿ ರವರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.