ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ಸಂಭವಿಸಿದೆ.
ಕೊಲೆಯಾದ ಮಹಿಳೆ ವನಜಾ ಪೂಜಾರ್ತಿ (60) ಎಂದು ತಿಳಿದು ಬಂದಿದೆ.
ಕೊಲೆ ಸಂಬಂಧ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಲೇರಿಯನ್ ಮೆಂಡೊನ್ಸಾ ಹಾಗೂ ಪ್ರವೀಣ್ ಮೆಂಡೊನ್ಸಾ ಅವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ವರು ಮದ್ಯಪಾನ ಮಾಡುತ್ತಿದ್ದರು.ಮಾರ್ಚ್ 9 ರಂದು ಸಂಜೆ 5 ಗಂಟೆಯಿಂದ ಮಾರ್ಚ್ 10 ರಂದು ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಅವರು ವನಜಾ ಪೂಜಾರ್ತಿಯನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2026 ಅಡಿಯಲ್ಲಿ ಕಲಂ 103 BNS ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ನಡೆದ ಸ್ಥಳಕ್ಕೆ ಕೆಎಂಸಿ ಮಣಿಪಾಲದ ಫೊರೆನ್ಸಿಕ್ ವೈದ್ಯರು, ಸೀನ್ ಆಫ್ ಕ್ರೈಂ ಆಫೀಸರ್ (SOCO) ತಂಡ, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.






