ಉಡುಪಿ, ಮಾ.10: ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಒಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಹೂಡೆ ಪಡುತೋನ್ಸೆ ಗ್ರಾಮದ ತೌಹಿದ್ ಮೊಹಲ್ಲಾ ರಸ್ತೆ ನಿವಾಸಿ ಮಹಮ್ಮದ್ ಅಕ್ರಂ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ
ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಕ್ರಂ ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂದು ತಿಳಿದುಬಂದಿದೆ.
ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಹೆಚ್‌ಸಿ ಸುರೇಶ್ ಕುಮಾರ್, ಹೆಚ್‌ಸಿ ವಿಶ್ವನಾಥ್, ಹೆಚ್‌ಸಿ ಆದರ್ಶ, ಡಬ್ಲ್ಯುಪಿಸಿ ಮಹಾಲಕ್ಷ್ಮಿ ಹಾಗೂ ತನಿಖಾಧಿಕಾರಿ ಪಿಎಸ್‌ಐ ಹುಸೇನ್ ಸಾಬ್ ಅವರ ತಂಡ ಹೂಡೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾರ್ಚ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.



