Home Crime ಬಸ್ ಹಾಗೂ ಕಾರು ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು…!!

ಬಸ್ ಹಾಗೂ ಕಾರು ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು…!!

ಶಿರಾಡಿ : ಘಾಟ್‌ನಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಮೃತರನ್ನು ಶಿಶಿಲದ ಚಂದ್ರಶೇಖರ (57), ಉಜಿರೆಯ ಜನಾರ್ದನ ಗೌಡ (58) ಮತ್ತು ಮರಕಡದ ಶ್ರೀಧರ ಗೌಡ (61) ಎಂದು ಗುರುತಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಉಜಿರೆಯ ಸುರೇಶ (58) ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಿಂದಾಗಿ ಶಿರಾಡಿ ಘಾಟ್ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತ್ತು.