ಉಳ್ಳಾಲ: ತಲಪಾಡಿ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವ ಖಚಿತ ಮಾಹಿತಿಯಂತೆ ಪೊಲೀಸರು ತಲಪಾಡಿ ಟೋಲ್‌ಗೇಟ್ ಬಳಿ ದಾಳಿ ನಡೆಸಿ, ಆರೋಪಿ ಮೊಹಮ್ಮದ್ ಅಲ್ತಾಫ್ (36) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 5.23 ಗ್ರಾಂ ಎಂಡಿಎಂಎ ಮಾದಕ ವಸ್ತು, ಮೊಬೈಲ್, ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ.



