Home Crime ಮಣಿಪಾಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು…!!

ಮಣಿಪಾಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು…!!

ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಯುವಕ ನೋರ್ವ ಚಿಕಿತ್ಸೆ ಫಲಿಸದೆ ಇಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ.

ಮೃತಪಟ್ಟ ಯುವಕ ಸಾಲಿಗ್ರಾಮದ ನಿವಾಸಿ ಆಸ್ತಿಕ್ ಮೆಂಡನ್ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದ ಪರಿಣಾಮ ಅವರು ಶನಿವಾರ ಬೆಳಿಗ್ಗೆ ಅಸುನಿಗಿರುತ್ತಾರೆ.

ಆಸ್ತಿಕ್ ಮೆಂಡನ್ ಮಣಿಪಾಲದ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು ತಂದೆ ತಾಯಿ ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.