ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 91 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಹಾಗೂ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ನೆರವೇರಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಸುಬ್ರಮಣ್ಯ ದೇವಸ್ಥಾನ ರಸ್ತೆ ಅಭಿವೃದ್ಧಿ (71 ಲಕ್ಷ) ಇದರ ಉದ್ಘಾಟನೆ ನೆರವೇರಿಸಿ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು ಕನಪುಕೋಟಿಗೆ ಹೋಗುವ ರಸ್ತೆ – 10 ಲಕ್ಷ, ನಡ್ಸಾಲು ಮುರುಡಿ ಬ್ರಹ್ಮಸ್ಥಾನದಿಂದ ಪಡುಹಿತ್ಲು ನಾರಾಯಣಗುರು ಮಂದಿರ ತನಕ ರಸ್ತೆ ಅಭಿವೃದ್ಧಿ – 10 ಲಕ್ಷ ಸೇರಿದಂತೆ ಒಟ್ಟು 20 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಪಡುಬಿದ್ರಿ ಗ್ರಾಮ, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಿಥುನ್ ಹೆಗ್ಡೆ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರವಿ ಶೆಟ್ಟಿ, ಶೋಭಾ ಶೆಟ್ಟಿ, ಸಂದೇಶ್ ಶೆಟ್ಟಿ, ಅಶೋಕ್ ಪೂಜಾರಿ, ಯಶೋಧ, ಮಹೇಂದ್ರ, ಗಣೇಶ್ ಕೋಟ್ಯಾನ್ ಹಾಗೂ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.



