Home Kundapura News ವ್ಯಕ್ತಿಯೋರ್ವರು ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು…!!

ವ್ಯಕ್ತಿಯೋರ್ವರು ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು…!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ತೋಟದಲ್ಲಿ ಕಾಯಿ ತೆಗೆಯಲು ತೆಂಗಿನ ಮರ ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು  ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದವರು ಗೋಪಾಲ ಎಂದು ತಿಳಿದು ಬಂದಿದೆ.

ಪ್ರಕರಣದ ವಿವರ : ಪಿರ್ಯಾದಿ ಚಂದ್ರ ಶೇಖರ (54) ಕರ್ಕುಂಜೆ ಗ್ರಾಮ ಕುಂದಾಪುರ ತಾಲೂಕು ಇವರ ಅಕ್ಕನ ಗಂಡ ಗೋಪಾಲ (66) ರವರು ದಿನಾಂಕ 15/03/2026 ರಂದು ಬೆಳಿಗ್ಗೆ 08:30 ಗಂಟೆಗೆ ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆ ಎಂಬಲ್ಲಿ ಅವರಿಗೆ ಸಂಬಂಧಿಸಿದ ತೋಟದಲ್ಲಿ ತೆಂಗಿನ ಕಾಯಿ ತೆಗೆಯಲು ತೆಂಗಿನ ಮರ ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮದ್ಯಾಹ್ನ 12:25 ಗಂಟೆಗೆ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್‌ ಕ್ರಮಾಂಕ:10/2026 ಕಲಂ 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.