ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮರಾಯ್ ಪಾಟ್ಕರ್, ಸ್ಥಳೀಯರಾದ ರಾಮಕೃಷ್ಣ ಶರ್ಮ, ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾದ ದಿನೇಶ್ ದೇವಾಡಿಗ, ಶಾಲಾ ಸಂಚಾಲಕರಾದ ರಾಮದಾಸ್ ಪ್ರಭು, ದೇವಸ್ಥಾನದ ಮೊಕ್ತೇಸರರಾದ ಜಯರಾಜ್ ಪ್ರಭು, ದೇವಸ್ಥಾನದ ಅಧ್ಯಕ್ಷರಾದ ಉಮೇಶ್ ಪ್ರಭು ಪಾಲಮೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.



